
ಮಂಗಳೂರಿನ ಪ್ರಸಿದ್ದ ಪ್ರವಾಸಿ ತಾಣ ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿ ಜೋಡಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು ಕಿರಿಕ್ ಮಾಡಿದ್ದಾರೆ.

ಭಾನುವಾರ ಕೇರಳದ ಯುವಕ ಹಾಗೂ ಬೆಂಗಳೂರಿನ ಯುವತಿ ಪಣಂಬೂರು ಬೀಚ್ ಗೆ ಆಗಮಿಸಿದ್ದರು. ಈ ವೇಳೆ ಅಲ್ಲಿಗಾಗಮಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಜೋಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿ ಹಾಗೂ ಹಿಂದೂ ಕಾರ್ಯಕರ್ತರನ್ನು ಠಾಣೆಗೆ ಕರೆದುಕೊಂಡು ಹೋಗಿ ಪರಿಸ್ಥಿತಿಯನ್ನು ನಿಯಂತ್ರಿಸಿರುವುದಾಗಿ ತಿಳಿದು ಬಂದಿದೆ.ಬಳಿಕ ಯುವಕ ಮತ್ತು ಯುವತಿ ಪೈಕಿ ಓರ್ವರು ಪಣಂಬೂರು ಠಾಣೆಯಲ್ಲಿ ದೂರು ನೀಡಿದ್ದು, ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೂರಿನ ಆಧಾರದಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ರಾಮಸೇನೆಯ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.