ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪ ಬಾಕಿಲ ಎಂಬಲ್ಲಿ ಸ್ಕೂಟರ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಮೃತಪಟ್ಟ ಘಟನೆ ಇಂದು ಸಂಭವಿಸಿದೆ.
ಗುತ್ತಿಗಾರು ಬಾಕಿಲ ಎಂಬಲ್ಲಿ ಘಟನೆ ಸಂಭವಿಸಿದ್ದು ಗುತ್ತಿಗಾರಿನಿಂದ ಸುಳ್ಯ ಕಡೆ ಬರುತ್ತಿದ್ದ ನಾಲ್ಕೂರಿನ ಶಿವರಾಮರು ಚಲಾಯಿಸುತ್ತಿದ್ದ ಸ್ಕೂಟರ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದ್ದು ಶಿವರಾಮರನ್ನು ತುಂಬಾ ದೂರದ ವರೆಗೆ ಎಳೆದುಕೊಂಡು ಹೋಯಿತು.

ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಸುಳ್ಯ ಆಸ್ಪತ್ರೆಗೆ ಕರೆತರಲಾಯಿತು. ಇದೀಗ ಗಾಯಾಳು ಮೃತಪಟ್ಟರೆಂದು ತಿಳಿದು ಬಂದಿದೆ. ಸ್ಕೂಟಿಯಲ್ಲಿ ಅವರ ಪುತ್ರಿಯೂ ಇದ್ದು, ಆಕೆಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
