ಬೆಳ್ತಂಗಡಿ ಪರವಾನಿಗೆ ಭೂಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ ಪರವಾನಿಗೆ ಭೂಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಹೊಂದಿದ ಭೂಮಾಪಕ ಆಗಿ ಕೆಲಸ ಮಾಡುತ್ತಿದ್ದ ವಿಶ್ವನಾಥ ರಾವ್ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಬಂಟ್ವಾಳದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪತ್ನಿ ಮತ್ತು ಪುತ್ರನನ್ನು ಅವರು ಹೊಂದಿದ್ದರು.

ಮೂಲತಃ ಹಾಸನ ಜಿಲ್ಲೆಯ ಬೇಲೂರಿನವರಾದ ವಿಶ್ವನಾಥ ರಾವ್ ಉಜಿರೆಯಲ್ಲಿ ವಾಸವಾಗಿದ್ದು, ಪರವಾನಗಿ ಹೊಂದಿದ ಭೂಮಾಪಕ ಆಗಿ ಕೆಲಸ ಮಾಡುತ್ತಿದ್ದರು. ರಕ್ತದೊತ್ತಡ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಂಟ್ವಾಳದಲ್ಲಿ ಹೃದಯಾಘಾತವಾಗಿದ್ದು, ಅವರನ್ನು ಬಂಟ್ವಾಳ ಆಸ್ಪತ್ರೆಗೆ ಕರೆತಂದ ವೇಳೆ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ