ಮಡಿಕೇರಿ : 3 ವರ್ಷದ ಮಗುವಿನ ಮೇಲೆ ಅತ್ಯಾಚಾರ : ಆರೋಪಿಯ ಬಂಧನ

ಮಡಿಕೇರಿ : 3 ವರ್ಷದ ಮಗುವಿನ ಮೇಲೆ ಅತ್ಯಾಚಾರ : ಆರೋಪಿಯ ಬಂಧನ

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಅರೆಕಾಡು ಗ್ರಾಮ ವ್ಯಾಪ್ತಿಯ ಖಾಸಗಿ ಸಂಸ್ಥೆಯ ತೋಟವೊಂದರಲ್ಲಿ ವ್ಯಕ್ತಿಯೊಬ್ಬ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿರುವ ಹೇಯ ಕೃತ್ಯ ನಡೆದಿದೆ ಎಂದು ವರದಿಯಾಗಿದೆ.

ತೋಟಕ್ಕೆ ಕಾಫಿ ಕೊಯ್ಯಲೆಂದು ಬಂದಿದ್ದ ಅಸ್ಸಾಂ ನ ಕಾರ್ಮಿಕ ದಂಪತಿಯ ಪುತ್ರಿಯ ಮೇಲೆ ಅದೇ ತೋಟದ ವಾಹನದ ಚಾಲಕ ಎರವರ ಮಣಿ ಎಂಬಾತ ಇಂದು ಮಧ್ಯಾಹ್ನ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಮಗುವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಾಲಕನ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದ ಕಾರ್ಮಿಕ ವರ್ಗ ಸಿದ್ದಾಪುರ ಪೊಲೀಸ್ ಠಾಣೆ ಎದುರು ಜಮಾಯಿಸಿ ಅಸಮಾಧಾನ ವ್ಯಕ್ತಪಡಿಸಿತು.

ರಾಜ್ಯ