
ಫೆ.17ರಂದು ಅಪರಾಹ್ನ ಸಂಪಾಜೆ ಗ್ರಾಮದ ಕಡೆಪಾಲದಲ್ಲಿ ಪ್ರಯಾಣಿಕರನ್ನು ಇಳಿಸುತ್ತಿದ್ದ ಕೆ.ಎಸ್. ಆರ್.ಟಿ.ಸಿ. ಬಸ್ಸಿನ ಹಿಂಬಾಗಕ್ಕೆ ಪಿಕಪ್ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಸಂಭವಿಸಿದೆ.


ಕಡೆಪಾಲ ಪ್ರಯಾಣಿಕರ ತಂಗುದಾಣದ ಬಳಿ ಬಸ್ಸು ಚಾಲಕ ಬಸ್ಸು ನಿಲ್ಲಿಸಿ, ಪ್ರಯಾಣಿಕರನ್ನು ಇಳಿಸುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಪಿಕಪ್ ಬಸ್ಸಿಗೆ ಢಿಕ್ಕಿ ಹೊಡೆದಿದ್ದು, ಬಳಿಕ ಈ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥ ಪಡಿಸಲಾಯಿತು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದೆ