ಕೆಲಸ ಸಿಗದ ಚಿಂತೆಯಲ್ಲಿ ನೇತ್ರಾವತಿಗೆ ಹಾರಿದ ಪುತ್ತೂರಿನ ಯುವಕ

ಕೆಲಸ ಸಿಗದ ಚಿಂತೆಯಲ್ಲಿ ನೇತ್ರಾವತಿಗೆ ಹಾರಿದ ಪುತ್ತೂರಿನ ಯುವಕ

ಬಂಟ್ವಾಳ :ಪುತ್ತೂರಿನ ಯುವಕನೋರ್ವ ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಚಿಂತೆಯಲ್ಲಿ ಪಾಣೆಮಂಗಳೂರಿನ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ಇಂದು ನಡೆದಿದೆ.

ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (25) ಎಂಬಾತನೇ ಪಾಣೆಮಂಗಳೂರಿನಲ್ಲಿ ನೇತ್ರಾವತಿಗೆ ಹಾರಲು ಯತ್ನಿಸಿದ ಯುವಕ.

ಈತ ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ದತೆಯಲ್ಲಿದ್ದಾಗ ಗಮನಿಸಿದ ಸ್ಥಳೀಯ ನಿವಾಸಿ ಯುವಕರಾದ ಹನೀಫ್@ಹನೀಫ್ ಬಾಯಿ, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್ ಸಿ ಪಿ, ತಸ್ಲೀಂ ಆರೀಫ್, ಮುಖ್ತಾರ್ ಅಕ್ಕರಂಗಡಿ, ಪಿ.ಎಂ. ಆರಿಫ್ ಹಾಗೂ ಮಮ್ಮು ಗೂಡಿನಬಳಿ ಅವರ ತಂಡ ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ನಿಶ್ಚಿತ್ ನನ್ನು ಆತ್ಮಹತ್ಯೆಯ ದವಡೆಯಿಂದ ಪಾರು ಮಾಡಿ 112 ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ

ರಾಜ್ಯ