
ಕಡಬ : ದಕ್ಷಿಣ ಕನ್ನಡದ ಉಪ್ಪಿನಂಗಡಿ ನೆಲ್ಯಾಡಿ ಹೊಸಮಜಲು ಎಂಬಲ್ಲಿ ಮಾವಿನ ಮರದಿಂದ ಮಿಡಿ ಕೊಯ್ಯುವಾಗ ಆಯಾ ತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ (48.)ಮೃತಪಟ್ಟ ದುರ್ದೈವಿಯಾಗಿದ್ದಾರೆ . ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದ ರಮೇಶ ಪತ್ನಿ ಹಾಗೂ ಮಕ್ಕಳೊಂದಿಗೆ ಹೊಸಮಜಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಜೆಯಲ್ಲಿ ಊರಿಗೆ ಬಂದಿದ್ದ ವೇಳೆ ಮನೆ ಸಮೀಪದ ಮಾವಿನ ಮರಕ್ಕೆ ಮಾವಿನ ಮಿಡಿ ಕೊಯ್ಯಲೆಂದು ಹತ್ತಿದಾಗ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು.
ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮೃತರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.