ಬಂಟ್ವಾಳ : ಅಕ್ರಮ ಮರಳು ಸಾಗಾಟ : ಲಾರಿ ಚಾಲಕ ಹಾಗೂ ಮಾಲಕನ ವಿರುದ್ದ ಪ್ರಕರಣ ದಾಖಲು

ಬಂಟ್ವಾಳ : ಅಕ್ರಮ ಮರಳು ಸಾಗಾಟ : ಲಾರಿ ಚಾಲಕ ಹಾಗೂ ಮಾಲಕನ ವಿರುದ್ದ ಪ್ರಕರಣ ದಾಖಲು

ಬಂಟ್ವಾಳ : ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

ಫೆ.20 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್‌ ಎಸ್‌ಐ ಮೂರ್ತಿ ಅವರ ನೇತೃತ್ವದ ಪೊಲೀಸರು ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ, ಕೆ ಎ 21 ಬಿ 2156 ನೊಂದಣಿಯ ಟಿಪ್ಪ‌ರ್ ಲಾರಿಯನ್ನು ತಡೆದು ಪರಿಶೀಲಿಸಿದಾಗ ಈ ಅಕ್ರಮ ಮರಳು ಸಾಗಾಟ ಕೃತ್ಯ ಬೆಳಕಿಗೆ ಬಂದಿದೆ.

ಲಾರಿ ಚಾಲಕನಲ್ಲಿ ಈ ಬಗ್ಗೆ ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ವಳಚ್ಚಿಲ್ ಹೊಳೆ ಬದಿಯಲ್ಲಿ ಮರಳು ತುಂಬಿಸಿಕೊಂಡು ಸಾಗಿಸುತ್ತಿರುವುದಾಗಿ ತಿಳಿಸಿದ ಹಿನ್ನಲೆಯಲ್ಲಿ ಮುಂದಿನ ಕಾನೂನು ಕ್ರಮಕ್ಕಾಗಿ ಲಾರಿ ಚಾಲಕ ಸಮೀರ್ ಹಾಗೂ ಲಾರಿ ಮಾಲಕ ಹಮೀದ್ ಎಂಬವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ 25/2024 ಕಲಂ;379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ರಾಜ್ಯ