
ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಮಹಿಳೆಯೋರ್ವರಿಗೆ ಢಿಕ್ಕಿ ಹೊಡೆದು, ಮಹಿಳೆ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಈ ಘಟನೆ ನಡೆದಿದೆ.

ಗಾಯಗೊಂಡ ಮಹಿಳೆಯನ್ನು ಮೂಡುಶೆಡ್ಡೆ ನಿವಾಸಿ ಮಮತಾ ಎಂದು ಗುರುತಿಸಲಾಗಿದೆ.
ಮಮತಾ ಅವರು ಪ್ರತಿನಿತ್ಯದಂತೆ ಕೆಲಸಕ್ಕೆ ತೆರಳಲೆಂದು ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಕಾರು ಅವರಿಗೆ ಢಿಕ್ಕಿ ಹೊಡೆದಿದೆನ್ನಲಾಗಿದೆ. ಅಪಘಾತಕ್ಕೀಡಾದ ಕಾರನ್ನು 9ನೇ ತರಗತಿಯ ಬಾಲಕ ಚಾಲನೆ ಮಾಡುತ್ತಿದ್ದುದಾಗಿ ಮಾಹಿತಿ ಲಭ್ಯವಾಗಿದ್ದು, ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಇನ್ನು ಮಹಿಳೆಗೆ ಢಿಕ್ಕಿಯಾದ ಕಾರು ಸ್ವಲ್ಪ ದೂರ ಮಹಿಳೆಯನ್ನು ಎಳೆದುಕೊಂಡು ಹೋಗಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ