ಮಂಗಳೂರು : ನಿಷೇಧಿತ ಮಾದಕ ವಸ್ತು ಮಾರಾಟ -ಆರೋಪಿ ಅರೆಸ್ಟ್..!

ಮಂಗಳೂರು : ನಿಷೇಧಿತ ಮಾದಕ ವಸ್ತು ಮಾರಾಟ -ಆರೋಪಿ ಅರೆಸ್ಟ್..!

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 75 ಸಾವಿರ ರೂ. ಮೌಲ್ಯದ 15 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ನಗದು 1,280 ರೂಪಾಯಿ, ಹಾಗೂ ಆಟೋ ರಿಕ್ಷಾ ಸೇರಿದಂತೆ ಒಟ್ಟು 91,280 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕು ಮೂಡುಶೆಡ್ಡೆ, ಶಿವನಗರದ ನಿವಾಸಿ ಮೊಹಮ್ಮದ್ ರಿಜ್ವಾನ್ (34) ಎಂದು ಗುರುತಿಸಲಾಗಿದೆ.

ಫೆ.23 ರಂದು ಮಂಗಳೂರು ತಾಲೂಕು ಪಡುಶೆಡ್ಡೆ ಗ್ರಾಮದ ಬೋಂದೆಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೆ ಟ್ರ್ಯಾಕ್ ನ ರೈಲ್ವೆ ಅಂಡರ್ ಪಾಸ್ ಬಳಿಯಲ್ಲಿ ವ್ಯಕ್ತಿಯೊಬ್ಬ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ನೇತೃತ್ವದ ಪೊಲೀಸರು ದಾಳಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದರು.

ಆರೋಪಿಯ ಮೇಲೆ ಈ ಹಿಂದೆ ಮಂಗಳೂರಿನ ಕಾವೂರು, ಮಂಗಳೂರು ಗ್ರಾಮಾಂತರ, ಕೊಣಾಜೆ ಪೊಲೀಸ್ ಠಾಣೆ ಹಾಗೂ ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣೆಗಳಲ್ಲಿ ಕೊಲೆ, ದರೋಡೆ, ಹಲ್ಲೆ, ಮಾದಕ ವಸ್ತು ಸೇವನೆ ಪ್ರಕರಣಗಳು ದಾಖಲಾಗಿರುತ್ತವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ