
ಕ್ರೀಡೆ ಭೂಮಿಯಲ್ಲಿರುವ ಪ್ರತೀ ಜೀವಿಗೂ ಅವಿಭಾಜ್ಯವಾದುದು, ಕ್ರೀಡೆಯಿಂದ ಏಕಾಗ್ರತೆ ಹೆಚ್ಚುವುದಲ್ಲದೆ, ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಬದುಕಿನ ಕ್ರೀಡೆಯಲ್ಲಿ ಗೆಲುವನ್ನು ಪಡೆಯಲು ಸಾಧ್ಯವಾಗುತ್ತದೆ, ಮಿತ ಆಹಾರದಿಂದ ದೇಹ ಮತ್ತು ಮನಸ್ಸನ್ನು ಹತೋಟಿಗೆ ತರಲು ಸುಲಭವಾಗಿತ್ತದೆ ಎಂದುಪ್ರಶಸ್ತಿ ಪುರಸ್ಕೃತ ಹಿರಿಯ ಕ್ರೀಡಾಪಟು ಬಾಲಕೃಷ್ಣ ಗೌಡ ಕುದ್ವ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.


ಅವರು ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬೆಳ್ಳಿ ಹಬ್ಬ ಪ್ರಯುಕ್ತ ಕ್ರೀಡಾ ಸಮ್ಮಿಲನ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು. ಸುಳ್ಯದ ಗೌಡರ ಯುವ ಸೇವಾ ಸಂಘ ಪ್ರವರ್ತಿಸಲ್ಪಡುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬೆಳ್ಳಿಹಬ್ಬದ ಪ್ರಯುಕ್ತ ಕೊಡಿಯಾಲಬೈಲು ಎಂಜಿಎಂ ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ಕ್ರೀಡಾ ಸಮ್ಮಿಲನ ಮತ್ತುಮಲ್ನಾಡ್ ಮಹಾತ್ಮಾಗಾಂಧಿ ಪ್ರೌಢಶಾಲೆಗೆ ನಿರ್ಮಿಸುವ ಎರಡು ಕೊಠಡಿಗಳಿಗೆ ಗುದ್ದಲಿಪೂಜೆ ಫೆ.24 ರಂದು ನಡೆಯಿತು ಕ್ರೀಡಾಕೂಟಕ್ಕೆ ನಿವೃತ ದೈಹಿಕ ಶಿಕ್ಷಕ ಮಾಣಿಬೆಟ್ಟು ರಾಧಕೃಷ್ಣ ರವರು ದ್ವಜಾರೋಹಣ ನೆರವೇರಿಸಿ ಚಾಲನೆ ನೀಡಿ ಶುಭಹಾರೈಸಿದರು.
ಸಂಸ್ಥೆಯ ಅಧ್ಯಕ್ಷ ಪಿ.ಸಿ. ಜಯರಾಮ ಅಧ್ಯಕ್ಷತೆಯನ್ನು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಗೌಡ ಸೋಶಿಯೋ ಎಜ್ಯುಕೇಶನ್ ಫೌಂಡೇಶನ್ ಸುಳ್ಯ ಇದರ ಅಧ್ಯಕ್ಷ ಚಂದ್ರಾ ಕೋಲ್ಟಾರ್ ,ಎಂ ಜಿ ಎಂ ಪ್ರೌಢ ಶಾಲೆಯ ಸಂಚಾಲಕ ನಿವೃತ ದೈಹಿಕ ಶಿಕ್ಷಕ ದೊಡ್ಡಣ್ಣ ಬರೆಮೇಲು, ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳಾದ ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ, ಕೆ.ಸಿ.ಸದಾನಂದ, ಪಿ.ಎಸ್.ಗಂಗಾಧರ್, ದಾಮೋದರ ನಾರ್ಕೋಡು, ಜಯಲಲಿತಾ ಕೆ.ಎಸ್., ನಳಿನಿ ಸೂರಯ್ಯ, ಲತಾ ಎಸ್ ಮಾವಜಿ, ಹೇಮಚಂದ್ರ ಐ.ಕೆ., ನವೀನ್ ಚಂದ್ರ ಜೆ.ವಿ., ಎಂ.ಜಿ.ಎಂ. ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ , ಪಿಟಿಎ ಅಧ್ಯಕ್ಷೆ ಪೂಜಾ ಆಲೆಟ್ಟಿ ಉಪಸ್ಥಿತರಿದ್ದರು.
ಸಂಘದ ಕಾರ್ಯವ್ಯಾಪ್ತಿಯಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ, ಇತರೆ ಸಹಕಾರ ಸಂಘಗಳಿಗೆ, ನಮ್ಮ ಸಂಸ್ಥೆಯ ಸದಸ್ಯರಿಗೆ, ಆಡಳಿತ ಮಂಡಳಿ ಸದಸ್ಯರಿಗೆ, ಸಲಹಾ ಸಮಿತಿಯವರಿಗೆ ಹಾಗೂ ಸಿಬ್ಬಂದಿಗಳಿಗೆ, ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಯಿತು. ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಟಿ ವಿಶ್ವನಾಥ್ ಸ್ವಾಗತಿಸಿ , ಸುಳ್ಯ ಶಾಖೆಯ ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಮೇರ್ಕಜೆ ವಂದಿಸಿದರು