ಪುತ್ತೂರು: ಟೂರಿಸ್ಟ್ ಟೆಂಪೋ ಹಾಗೂ ಆಕ್ಟಿವಾ ನಡುವೆ ಅಪಘಾತ -ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ಟೂರಿಸ್ಟ್ ಟೆಂಪೋ ಹಾಗೂ ಆಕ್ಟಿವಾ ನಡುವೆ ಅಪಘಾತ -ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ಕಬಕದ ಪೋಳ್ಯದಲ್ಲಿ ಮಿನಿ ಟೂರಿಸ್ಟ್ ಟೆಂಪೋ ಹಾಗೂ ಆಕ್ಟಿವಾ ನಡುವೆ ಅಪಘಾತ ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರನ್ನು ನೆಹರುನಗರ ಮಾಸ್ಟರ್ ಪ್ಲಾನರಿ ಕಾರ್ಮಿಕ, ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೋರಸ್ ರಾಜಾ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಮಿನಿ ಟೂರಿಸ್ಟ್ ಟೆಂಪೋ ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ಸ್ಕೂಟರ್ ಸವಾರ ಮೃತಪಟ್ಟಿದ್ದು, ಸಹ ಸವಾರ ತೀವ್ರ ಗಾಯಗೊಂಡಿದ್ದಾರೆ.ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಾಜ್ಯ