ಉಡುಪಿ : ಪ್ರವಾಸಕ್ಕೆ ಬಂದಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವು..!

ಉಡುಪಿ : ಪ್ರವಾಸಕ್ಕೆ ಬಂದಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವು..!

ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಇಳಿದಿದ್ದ ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಸಾವನ್ನಪ್ಪಿದ್ದಾರೆ. ಪ್ರವಾಸಕ್ಕೆಂದು ಬಂದಿದ್ದ ಮೂವರು ಗೆಳೆಯರ ತಂಡದ ಇಬ್ಬರು ಈಜು ಬಾರದೆ ಮುಳುಗಿರುವ ಸಾಧ್ಯತೆ ಇದೆ. ಶೃಂಗೇರಿಯಲ್ಲಿ ವೈದ್ಯರಾಗಿರುವ ಡಾ. ದೀಪಕ್ ಹಾಗೂ ಶಿವಮೊಗ್ಗದ ವ್ಯಾಪಾರಿ ಶೈನು ಡೇನಿಯಲ್ ಸಾವನ್ನಪ್ಪಿದ್ದಾರೆ. ಹೆಬ್ರಿಗೆ ಪ್ರವಾಸಕ್ಕೆ ಬಂದು ವಾಪಾಸ್ಸಾಗುವಾಗ ನದಿಗೆ ಇಳಿದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

ರಾಜ್ಯ