
ಕಡಬ: ಸುಬ್ರಹ್ಮಣ್ಯ ಗ್ರಾಮದ ಬಿಲದ್ವಾರದಲ್ಲಿ ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಚಾಲಕ ಬಸ್ಸು ಚಲಾಯಿಸಿದ ಪರಿಣಾಮ ಮಹಿಳೆಯೋರ್ವರು ಕೆಳಕ್ಕೆ ಬಿದ್ದು ಗಾಯಗೊಂಡಿರುವ ಘಟನೆ ಫೆ.27ರಂದು ಬೆಳಿಗ್ಗೆ ನಡೆದಿದೆ.

ಗಾಯಗೊoಡ ಮಹಿಳೆಯನ್ನು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹೂವಪ್ಪ ಗೌಡರವರ ಪತ್ನಿ ವಸಂತಿ ಎಂ.(42ವ.) ಎಂದು ಗುರುತಿಸಲಾಗಿದೆ.
ಇವರು ತನ್ನ ಮಗಳೊಂದಿಗೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ (ಕೆಎ 19 ಎಫ್ 3247) ಪ್ರಯಾಣಿಸುತ್ತಿದ್ದವರು, ಸುಬ್ರಹ್ಮಣ್ಯ ಬಿಲದ್ವಾರದ ಬಳಿ ಅವರು ಇಳಿಯುತ್ತಿದ್ದಾಗ ನಿರ್ವಾಹಕ ಗಮನಿಸದೇ ಬಸ್ ಚಲಾಯಿಸಲು ಸೂಚನೆ ನೀಡಿದ್ದಾರೆ. ಈ ವೇಳೆ ಬಸ್ ಚಾಲಕ ಮಂಜುನಾಥರವರು ಬಸ್ ಚಲಾಯಿಸಿದ ಪರಿಣಾಮ ವಸಂತಿರವರು ಬಸ್‌ನಿಂದ ಕೆಳಗೆ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.ಗಾಯಾಳು ವಸಂತಿ ಅವರನ್ನು ಚಿಕಿತ್ಸೆಗಾಗಿ ದೇರಳ ಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೂವಪ್ಪ ಅವರು ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 12/2024 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
