ಅರಂಬೂರು : ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕ ಸಾವು

ಅರಂಬೂರು : ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕ ಸಾವು

ಮಾ.1ರಂದು ಬೆಳಿಗ್ಗೆ ಅರಂಬೂರಿನ ಪಾಲಡ್ಕ ಎಂಬಲ್ಲಿ ಸಂಭವಿಸಿದ ಬಸ್ – ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ, ಇದೀಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇಂದು ಬೆಳಿಗ್ಗೆ ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಖಾಸಗಿ ಬಸ್ ಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ರಾಜ್ಯ