
ಮಂಗಳೂರು: ಉರ್ವ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರ ಮೊಬೈಲ್ ಕಳವು ಪ್ರಕರಣದ ಆರೋಪಿ ಮಹೇಶ್ ಪೈ ಎಂಬಾತನಿಗೆ ಮಂಗಳೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ (ಹಿರಿಯ ವಿಭಾಗ) ಮತ್ತು ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.2023 ಜೂನ್ 18ರಂದು ಉರ್ವಾ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಿಂದ ವಿದ್ಯಾರ್ಥಿನಿ ಯರ 3 ಮೊಬೈಲ್ ಫೋನ್ ಕಳವಾಗಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಆರೋಪಿ ಮಹೇಶ್ ಪೈಯನ್ನು ಉರ್ವ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜಪಡಿಸಿದ್ದರು. ಬಳಿಕ ಈತನ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ನ್ಯಾಯಾಲಯವು ಆರೋಪಿ ವಿರುದ್ಧದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮೂರು ವರ್ಷ ಜೈಲು ಶಿಕ್ಷೆ ಮತ್ತು 5,000ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.