
ಕಡಬ ತಾಲುಕು ಸುಬ್ರಹ್ಮಣ್ಯ ದ ಇಂಜಾಡಿ ಬಳಿ ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ವರಿಯಾಗಿದೆ.ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಎಂಬವರು ಮಾ.3 ರಾತ್ರಿ ಗಂಟೆ 9 ರ ಆಸುಪಾಸು ಇಂಜಾಡಿ ಬಳಿ ಅಟೋದಲ್ಲಿ ಹೋಗುತ್ತಿರುವಾಗ ಲೋ ಬಿ.ಪಿ ಆಗಿ ರಿಕ್ಷಾ ರಸ್ತೆ ಬದಿ ಚಲಿಸಿ ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡರೆನ್ನಲಾಗಿದೆ.

ಚಿಕಿತ್ಸೆ ಫಲಕಾರಿಯಾಗದೆ ಕಡಬ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಒರ್ವ ಪುತ್ರಿ ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ.ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದ ಕಾರಣ ಈ ಸಾವು ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಪ್ರತಿಭಟನೆ ನಡೆಸಲು ಮುಂದಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
