
ಪಂಜ ಸಮೀಪದ ಡಬಲ್ ಕಟ್ಟೆ ಯಿಂದ ಹಾಡುಹಗಲೇ ಮನೆಯೊಳಗೆ ನುಗ್ಗಿದ ಕಳ್ಳರು ಮಹಿಳೆಯ ಕುತ್ತಿಗೆಯಲ್ಲಿದ್ದ ಚೈನ್ ಕದ್ದು ಪರಾರಿಯಾದ ಘಟನೆ ವರದಿಯಾಗಿದೆ.

ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್ ಕಟ್ಟೆ ಸೀತಮ್ಮ ಎಂಬವರು ಮನೆಗೆ ಬಾಗಿಲು ಹಾಕಿ ಪಕ್ಕದ ಮನೆಗೆ ಹೋಗಿದ್ದರು. ಇದೇ ವೇಳೆ ಮನೆಯೊಳಗೆ ಸದ್ದು ಕೇಳಿತ್ತೆಂದು ಮನೆಗೆ ಬಂದಾಗ ಇಬ್ಬರು ಕಳ್ಳರು ಮನೆಯೊಳಗೆ ಹಿಂದಿನ ಬಾಗಿಲಿನಿಂದ ನುಗ್ಗಿದ್ದು ಕಂಡು ಬಂದಿದೆ ಎನ್ನಲಾಗಿದೆ.ಇದೇ ವೇಳೆ ಅವರು ಜೀವ ಬೆದರಿಕೆ ಒಡ್ಡಿ ದೂಡಿ ಹಾಕಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಕಸಿದು ಪರಾರಿಯಾಗಿದ್ದಾರೆ. ಬೈಕ್ ನಲ್ಲಿ ಇಬ್ಬರು ಕಳ್ಳರು ಬಂದಿದ್ದು ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಚುರುಕು ಗೊಳಿಸಿದ್ದಾರೆ.
