
ಬೆಳ್ಳಾರೆ : ಮಾ.05 ಮಂಗಳವಾರದಂದು ಬೆಳ್ಳಂಬೆಳಗ್ಗೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ನಡೆದಿದೆ.

ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
