
ಕಾನೂನಿನ ಚೌಕಟ್ಟಿನ ಒಳಗೆ ಕ್ಷೇತ್ರದ ಜನತೆಗೆ ಏನೇ ಸಮಸ್ಯೆ ಬಂದರೂ ತಾವು ಶಾಸಕನಾಗಿ ತಮ್ಮೊಂದಿಗೆ ಇರುತ್ತೇನೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಭರವಸೆ ನೀಡಿದ್ದಾರೆ.

ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ದೇವರ ಕೊಲ್ಲಿ ಗ್ರಾಮದ ಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ಕ್ಷೇತ್ರದ ಜನರ ಸಮಸ್ಯೆ ಎಂದರೆ ಅದು ತನ್ನ ವೈಯುಕ್ತಿಕ ಸಮಸ್ಯೆ .ಹಾಗಾಗಿ ಅದಕ್ಕೆ ಪರಿಹಾರ ನೀಡುವಲ್ಲಿ ತಾವು ಬದ್ದರಾಗಿದ್ದೇವೆ ಎಂದು ತಿಳಿಸಿದರು.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನ ಮತ್ತು ಜನಪ್ರತಿನಿಧಿ ಒಟ್ಟಾಗಿ ಸೇರಿದರೆ ಮಾತ್ರ ಅಭಿವೃದ್ಧಿ ಸಾಧ್ಯ.ಹಾಗಾಗಿ ಜನತೆ ತಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಹೇಳಿದರು.
ಇದೇ ಸಂಧರ್ಭದಲ್ಲಿ ಸ್ಥಳೀಯ ಯುವಕರು ಆಯೋಜಿಸಿ ರುವ ಕ್ರೀಡಾ ಕೂಟದ ಪೋಸ್ಟರ್ ಅನ್ನು ಎ.ಎಸ್.ಪೊನ್ನಣ್ಣ ಬಿಡುಗಡೆ ಮಾಡಿದರು.ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷರಾದ ಸೂರಜ್ ಹೊಸೂರು,ಡಿಸಿಸಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ.ಗ್ರಾಮದ ಮುಖ್ಯಸ್ಥರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಸಯೀದ್ ಅಲವಿ,ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲಾಕ್ಷಿ,ಉಪಾಧ್ಯಕ್ಷರಾದ ಬೈನೆರವನ ಯಶೋಧಿನಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

