
ಪುತ್ತೂರು: ಕಳೆದ ಕೆಲವು ದಿನಗಳಿಂದ ಕುಸಿತದ ಹಾದಿಯಲ್ಲಿದ್ದ ಮಂಗಳೂರು ಚಾಲಿ ಅಡಿಕೆ ಧಾರಣೆ ಇದೀಗ ಧಾರಣೆ ಏರಿಕೆಯತ್ತ ಮುಖ ಮಾಡಿದೆ.ಹೊರ ಮಾರುಕಟ್ಟೆಯಲ್ಲಿ ಕಳೆದ ಎರಡು ವಾರದ ಹಿಂದಿನ ಧಾರಣೆ ಗಮನಿಸಿದರೆ ಹೊಸ ಅಡಿಕೆಗೆ ಕೆ.ಜಿ.ಗೆ 10 ರೂ., ಸಿಂಗಲ್ ಚೋಲ್ 15 ರೂ., ಡಬ್ಬಲ್ ಚೋಲ್ 20 ರೂ.ನಷ್ಟು ಹೆಚ್ಚಳ ಕಂಡಿದೆ.

ದಿನದಿಂದ ದಿನಕ್ಕೆ ದರ ಏರಿಕೆಯತ್ತ ಮುಖ ಮಾಡಿದೆ.ಹೊರ ಮಾರುಕಟ್ಟೆಗೆ ಹೋಲಿಸಿದರೆ ಕ್ಯಾಂಪ್ಕೋದಲ್ಲಿ ಐದು ರೂ. ಕಡಿಮೆ ಇದೆ. ಕ್ಯಾಂಪ್ಕೋ ಮಾರು ಕಟ್ಟೆಯಲ್ಲಿ ಫೆ. 26ರಂದು ಹೊಸ ಅಡಿಕೆಗೆ 325-345 ರೂ., ಸಿಂಗಲ್ ಚೋಲ್‌ಗೆ 400 ರೂ.ನಿಂದ 410 ರೂ., ಡಬ್ಬಲ್ ಚೋಲ್ 400 ರೂ.ನಿಂದ 425 ರೂ. ತನಕ ಇತ್ತು. ಮಾ. 12ರಂದು ಹೊಸ ಅಡಿಕೆಗೆ 340-350 ರೂ., ಸಿಂಗಲ್ ಚೋಲ್‌ಗೆ 418 ರೂ.ನಿಂದ 420 ರೂ., ಡಬ್ಬಲ್ ಚೋಲ್ 430 ರೂ.ನಿಂದ 440 ರೂ. ತನಕ ಇತ್ತು. ಅಡಿಕೆಗೆ ಪ್ರಸ್ತುತ ಬೇಡಿಕೆ ಹೆಚ್ಚುತ್ತಿರುವುದರಿಂದ ಧಾರಣೆ ಇನ್ನಷ್ಟು ಏರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
