ಮಣಿಪಾಲ: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಣಿಪಾಲ: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಣಿಪಾಲ: ಪ್ರಕರಣವೊಂದಕ್ಕೆ ಸಂಬಂಧಿಸಿ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪಂಜಾಬ್ ರಾಜ್ಯದ ಫಿರೋಜಿಪುರ ಜಿಲ್ಲೆಯ ತಾರಾಚಂದ್ ಎಂದು ಗುರುತಿಸಲಾಗಿದೆ. ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್‌ ಉಪ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಥಾಟ್ಸನ್, ಶರಣಬಸವ ಆರೋಪಿಯನ್ನು ಪಂಜಾಬ್ ರಾಜ್ಯದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.

ರಾಜ್ಯ