ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಮಾ.14ರಂದು ಸಂಜೆಯಿಂದ ಮರುದಿನ ದಿನಾಂಕ ಮಾ.15ರಂದು ಬೆಳಗ್ಗಿನ ಅವಧಿಯಲ್ಲಿ, ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಅ.ಕ್ರ 30-2024 ಕಲಂ 380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿ ಮಂಡೆಕೋಲು ಗ್ರಾಮ, ಸುಳ್ಯ ನಿವಾಸಿ ಸುಪೀತ್‌ ಕೆ (20) ಎಂಬಾತನನ್ನು ವಶಕ್ಕೆ ಪಡೆದು, 83,000/ ರೂ ಮೌಲ್ಯದ 209 ಕೆ ಜಿ ಸುಲಿದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ರೂ 1,00,000/ ಮೌಲ್ಯದ ಆಟೋ ರಿಕ್ಷಾ ವನ್ನು ಸ್ವಾಧೀನಪಡಿಸಲಾಗಿದೆ.

ಜಿಲ್ಲೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಬೆಳ್ಳಾರೆ ಪೊಲೀಸ್‌ ಠಾಣಾ ಉಪನಿರೀಕ್ಷಕರಾದ ಬಿ.ಪಿ ಸಂತೋಷ್ ಹಾಗೂ ಠಾಣಾ ಸಿಬ್ಬಂಧಿಗಳಾದ ನವೀನ ಕೆ HC571, ಕೃಷ್ಣಪ್ಪ HC656, ದೇವರಾಜ್‌ HC2025, ಸಂತೋಷ್‌ ಕೆ ಜಿ PC 2308, ಸುಭಾಸ್‌ ಕಿತ್ತೂರ PC 1018, ಪುರಂದರ APC ರವರುಗಳ ತನಿಖಾ ತಂಡ ಕಾರ್ಯಚರಣೆ ನಡೆಸಿರುತ್ತಾರೆ.

ರಾಜ್ಯ