
ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಚಾಲಕನಿಗೆ ನಿದ್ರೆ ಆವರಿಸಿದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮೋರಿಗೆ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಮಾ.23ರಂದು ಅಪರಾಹ್ನ ಸಂಭವಿಸಿದೆ.


ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಗೂನಡ್ಕದ ಶಿರಾಡಿ ದೈವಸ್ಥಾನದ ದ್ವಾರದ ಬಳಿ ಮೋರಿಗೆ ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ ಎಂದು ತಿಳಿದುಬಂದಿದೆ.
