ಬಂಟ್ವಾಳ : ಕಾರು ಹಾಗೂ ಲಾರಿ ಮಧ್ಯೆ ಅಪಘಾತ ; ಹಲವರಿಗೆ ಗಾಯ

ಬಂಟ್ವಾಳ : ಕಾರು ಹಾಗೂ ಲಾರಿ ಮಧ್ಯೆ ಅಪಘಾತ ; ಹಲವರಿಗೆ ಗಾಯ

ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿ ಎಂಬಲ್ಲಿ ಮರ ಸಾಗಾಟದ ಲಾರಿಗೆ ಕಾರು ಡಿಕ್ಕಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ.

ಲಾರಿಯ ಹಿಂಭಾಗಕ್ಕೆ ಕಾರು ಢಿಕ್ಕಿ ಹೊಡೆದಿದ್ದು ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ತೊಂದರೆಯಾಗಿದೆ.

ರಾಜ್ಯ