ಬಂಟ್ವಾಳ : ಮಹಡಿಯ ಮೇಲಿಂದ ಬಿದ್ದು ಬಾಲಕ ಮೃತ್ಯು

ಬಂಟ್ವಾಳ : ಮಹಡಿಯ ಮೇಲಿಂದ ಬಿದ್ದು ಬಾಲಕ ಮೃತ್ಯು

ಬಂಟ್ವಾಳ: ಎ.‌ 1ರ ಮುಂಜಾನೆ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಬಾಲಕನನ್ನು ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಎಂದು ಗುರುತಿಸಲಾಗಿದೆ.

ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.ಬಂಟ್ವಾಳ ನಗರ ಪೊಲೀಸ್ ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯ