ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನ – ಗಾಯಾಳು ಸ್ಥಿತಿ ಗಂಭೀರ

ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನ – ಗಾಯಾಳು ಸ್ಥಿತಿ ಗಂಭೀರ

ಉಳ್ಳಾಲ ನಗರಸಭೆ ಕಚೇರಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರಿಗೆ ಶನಿವಾರ ಮಧ್ಯಾಹ್ನ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು ಚೂರಿ ಇರಿತಕ್ಕೆ ಒಳಗಾದವರನ್ನು ವ್ಯಕ್ತಿಯನ್ನು ಹಮೀದ್ ಪಿ.ಎಂ. ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಹಮೀದ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರು ಬಂದರು ಭಾಗದ ಈಜುಪಟುವೊಬ್ಬರು ಈ ಕೃತ್ಯ ಎಸಗಿದ್ದಾರೆ ಎನ್ನುವ ಬಗ್ಗೆ ಅನುಮಾನವಿದ್ದು . ಹಣದ ವಿಚಾರವಾಗಿ ಕೃತ್ಯ ನಡೆದಿರುವ ಸಾಧ್ಯತೆಗಳಿವೆ ಎಂದು ಉಳ್ಳಾಲ ಪೊಲೀಸರು ಸಂದೇಹ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಉಳ್ಳಾಲ ಪೊಲೀಸರು ಆರೋಪಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ

ಮನೋರಂಜನೆ