
ಆಲಂಕಾರು : ದಿಢೀರ್ ನಾಯಿ ಅಡ್ಡ ಬಂದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಆಲಂಕಾರು ಬಳಿ ನಡೆದಿದೆ.

ಆಲಂಕಾರು ಗ್ರಾಮದ ಸುರುಳಿ ಎಂಬಲ್ಲಿ ಈ ಘಟನೆ ನಡೆದಿದ್ದು ಆಟೋ ಚಾಲಕ ಸುಬ್ರಹ್ಮಣ್ಯ ನಾಯ್ಕ ಗಾಯಗೊಂಡ ವ್ಯಕ್ತಿ .ತನ್ನ ಆಟೋದಲ್ಲಿ ಸುರುಳಿ ಕಡೆಯಿಂದ ಆಲಂಕಾರಿನತ್ತ ಬರುವತ್ತಿರುವಾಗ ಸುರುಳಿ ಸೇತುವೆಯ ಬಳಿ ಇಕ್ಕಟ್ಟಾದ ಸ್ಥಳದಲ್ಲಿ ಏಕಾಏಕಿ ನಾಯಿ ಅಡ್ಡ ಬಂದು ಅಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಚಾಲಕನ ಕಾಲು ಮುರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಆಟೋದಲ್ಲಿ ಚಾಲಕ ಮಾತ್ರ ಇದ್ದು, ಪ್ರಯಾಣಿ ಕರು ಇಲ್ಲದೆ ಇರುವುದರಿಂದ ಸಂಭಾವ್ಯ ಅಪಾಯ ತಪ್ಪಿದೆ. ಘಟನೆ ನಡೆದ ಸ್ಥಳ ಅಪಾಯಕಾರಿಯಾಗಿದ್ದು, ಇಕ್ಕಟ್ಟಾದ ಪರಿಣಾಮ ಇಲ್ಲಿ ಹಿಂದೆಯೂ ಹಲವು ಅಫಘಾತ ನಡೆದಿತ್ತು.
