ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

.

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ

ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ.

ಸಂಜೆ 5 ಗಂಟೆ ಸುಮಾರಿಗೆ ಟ್ರೆಸ್ಸಿ ಬಾವಿಯಿಂದ ನೀರು ಸೇದುತ್ತಿದ್ದಾಗ ತಲೆ ಸುತ್ತಿ ಬಾವಿಗೆ ಬಿದ್ದಿದ್ದಾರೆ. ಕೂಡಲೇ ಆಕೆಯ ಕುಟುಂಬಸ್ಥರು ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಧಾವಿಸಿ ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ.ಬಾವಿಯಲ್ಲಿ ಎಂಟು ಅಡಿಗೂ ಹೆಚ್ಚು ನೀರು ಇತ್ತುಎನ್ನಲಾಗಿದೆ.

ರಾಜ್ಯ