ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 58.78 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 58.78 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ 812 ಗ್ರಾಂ ಚಿನ್ನವನ್ನು ಸಾಗಾಟಕ್ಕೆ ಯತ್ನಿಸಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿ ಮಂಗಳೂರಿನ ನಿವಾಸಿಯಾಗಿದ್ದು, ದಮನ್ ನಿಂದ ಎರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ್ದು, ಪರಿಶೀಲನೆ ವೇಳೆ ಗುದದ್ವಾರದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದು ಪತ್ತೆಯಾಗಿದೆ. ಬಳಿಕ ಪ್ರಯಾಣಿಕನನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕರಿಂದ 58,78,880 ರೂ ಮೌಲ್ಯದ 812 ಗ್ರಾಂ ಚಿನ್ನವನ್ನು ಗುರುವಾರ, ಏಪ್ರಿಲ್ 11 ರಂದು ವಶಪಡಿಸಿಕೊಂಡಿದ್ದಾರೆ. ತಪಾಸಣೆ ವೇಳೆ 812 ಗ್ರಾಂ 24-ಕ್ಯಾರೆಟ್ ಚಿನ್ನಪತ್ತೆಯಾಗಿದೆ. ಮುಂದಿನ ವಿಚಾರಣೆಗಾಗಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ರಾಜ್ಯ