
ಮಡಿಕೇರಿ : ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ಸಿದ್ದಾಪುರ ಸಮೀಪದ ಅತ್ತಿಮಂಗಲ ಬಳಿ ನಡೆದಿದೆ.


ಅರೆಕಾಡುವಿನಿಂದ ನೆಲ್ಯಹುದಿಕೇರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ರಂಷಾದ್ ಮತ್ತು ಅವರೊಂದಿಗಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೈಕ್ ಸವಾರ ರಂಷಾದ್ ಗಾಯಗೊಂಡಿದ್ದು, ಸಿದ್ದಾಪುರ ಆಸ್ಪತ್ರೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.