ಇಂದು ಸಂಜೆ ಮಂಗಳೂರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ  ರೋಡ್ ಶೋ

ಇಂದು ಸಂಜೆ ಮಂಗಳೂರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ  ರೋಡ್ ಶೋ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದ.ಕ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಪ್ರಚಾರಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಇಂದು ಸಂಜೆ ರೋಡ್ ಶೋ ನಡೆಸಲಿದ್ದಾರೆ. ಮೊದಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಬ್ರಹ್ಮಶ್ರಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ರೋಡ್ ಶೋ ಆರಂಭಿಸಲಿದ್ದಾರೆ. ಈ ರೋಡ್ ಶೋ ಪಿ ವಿ ಎಸ್ ವೃತ್ತದ ಮೂಲಕ ಸಾಗಿ ರಾಷ್ಟ್ರ ಕವಿ ಮಂಜೇಶ್ವರ .ಗೋವಿಂದ ಪೈ ವೃತ್ತದಲ್ಲಿ ಕೊನೆಗೊಳ್ಳಲಿದೆ. ಸಹಸ್ರಾರು ಕಾರ್ಯಕರ್ತರು ಈ ರೋಡ್ ಶೋ ದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ರಾಷ್ಟ್ರೀಯ