ಉಡುಪಿ : ಹೆದ್ದಾರಿಯಲ್ಲಿ ಭೀಕರ ಅಪಘಾತ; ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

ಉಡುಪಿ : ಹೆದ್ದಾರಿಯಲ್ಲಿ ಭೀಕರ ಅಪಘಾತ; ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ರ ಹೇರೂರಿನಲ್ಲಿ ಏ.18 ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಲಾರಿಯಡಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಹೇರೂರು ನಿವಾಸಿ ಕೃಷ್ಣ ಗಾಣಿಗ ಮೃತ ವ್ಯಕ್ತಿ . ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿದ ಬೈಕ್ ಸವಾರರಾಗಿದ್ದ ಕೃಷ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಕೃಷ್ಣ ಅವರನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ.ಘಟನೆ ಬಳಿಕ ರಸ್ತೆಯಲ್ಲಿ ಏಕ ಪಥ ಸಂಚಾರ ಮಾಡಿದ ಕಾರಣ ಭಾರಿ ಸಂಚಾರ ದಟ್ಟಣೆ ಉಂಟಾಗಿ ಸಾವಿರಾರು ಜನರು ಪರದಾಡಬೇಕಾಯಿತು.ಕೃಷ್ಣ ಅವರು ಉಡುಪಿ ನಗರ ಪಾಲಿಕೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬ್ರಹ್ಮಾವರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ.

ರಾಜ್ಯ