ಪುತ್ತೂರು ಚುನಾವಣಾ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದ  ಬಸ್-ಆಟೋರಿಕ್ಷಾಕ್ಕೆ ಡಿಕ್ಕಿ : ಆಟೋ ಚಾಲಕ ಮೃತ್ಯು 

ಪುತ್ತೂರು ಚುನಾವಣಾ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದ  ಬಸ್-ಆಟೋರಿಕ್ಷಾಕ್ಕೆ ಡಿಕ್ಕಿ : ಆಟೋ ಚಾಲಕ ಮೃತ್ಯು 

ಪುತ್ತೂರು : ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಹೊಡೆದುಕೊಂಡ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಇಂದು ಮುಂಜಾನೆ ಮುಕ್ರಂಪಾಡಿಯಲ್ಲಿ ನಡೆದಿದೆ.

ಆಟೋ ರಿಕ್ಷಾ ಚಾಲಕ ಜೈಸನ್ (30) ಮೃತಪಟ್ಟವರು.

ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ರಿಕ್ಷಾ ಮಧ್ಯೆ ಡಿಕ್ಕಿ  ಸಂಭವಿಸಿದೆ. ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದು ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಜೈಸನ್‌ ಅವರನ್ನು ಹೊರತೆಗೆದಿದ್ದಾರೆ. ಆದರೆ ಅವರು ಆಗಲೇ ಮೃತಪಟ್ಟಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ

ರಾಜ್ಯ