
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮವಾಗಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸುಮಾರು 40 ಪ್ಲಾಸ್ಟಿಕ್ ಬುಟ್ಟಿಯಷ್ಟು ಮರಳನ್ನು ರಾಶಿ ಹಾಕುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

ಮೇ.01ರಂದು ಮಧ್ಯಾಹ್ನ ಸಮಯ, ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಯಾವುದೇ ಪರವಾನಿಗೆಯನ್ನು ಪಡೆಯದೇ ಪಟ್ರಮೆ ಹೊಳೆಯಿಂದ ಮರಳನ್ನು ಕಳವು ಮಾಡಿ, ಮರಳನ್ನು ರಾಶಿ ಹಾಕಿರುವುದಾಗಿ ಮಾಹಿತಿ ಬಂದ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸಮರ್ಥ ರ ಗಾಣಿಗೇರ ರವರು ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿ, ಈ ಬಗ್ಗೆ ಆರೋಪಿ ಶ್ರೀಧರ ಎಂಬಾತನ ವಿರುದ್ಧ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅ ಕ್ರ 29/2024 ಕಲಂ: 379 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
