ಸಂಪಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಡಿಕ್ಕಿ ಹೊಡೆದ ಕಾರು: ದಂಪತಿಗೆ ಗಂಭೀರ ಗಾಯ.

ಸಂಪಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಡಿಕ್ಕಿ ಹೊಡೆದ ಕಾರು: ದಂಪತಿಗೆ ಗಂಭೀರ ಗಾಯ.

ಚಾಲಕನ ನಿಯಂತ್ರಣ ತಪ್ಪಿ ಹೋಟೆಲೊಂದಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯವಾದ ಘಟನೆ ಮೇ.3ರ ನಸುಕಿನ ವೇಳೆ ಸಂಪಾಜೆಯಲ್ಲಿ ನಡೆದಿದೆ

.ವಿಟ್ಲದ ಅಡ್ಯನಡ್ಕ ದಂಪತಿಗಳು ಕಾರಿನಲ್ಲಿ ಪುತ್ತೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ   ಡಿಕ್ಕಿ ಹೊಡೆದಿದೆ. ಕಾರು ಚಾಲಕ ಹಾಗೂ ಮುಂಭಾಗದಲ್ಲಿ ಕುಳಿತಿದ್ದ ಅವರ ಪತ್ನಿ ಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಸೇರಿ ಎರಡು ಅಂಬ್ಯುಲೆನ್ಸ್ ಮೂಲಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯ