
ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನ10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು ಶೇ.100 ಫಲಿತಾಂಶ ದಾಖಲಿಸಿದೆ.


ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗುವ ಮೂಲಕ ಶೇ 100% ಪಲಿತಾಂಶ ದಾಖಲಾಗಿದೆ.ಈ ಪೈಕಿ 28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ.ಶಾರ್ವರಿ ಆರ್.ಎಸ್. ಶೇ.95.8 ಅಂಕಗಳೊಂದಿಗೆ ತರಗತಿಗೆ ಪ್ರಥಮ ಸ್ಥಾನಿಯಾಗಿದ್ದಾರೆ ಧನುಷ್ ರಾಮ್ ಶೇ.94.2 ಅಂಕಗಳೊಂದಿಗೆ
ದ್ವಿತೀಯ ಹಾಗೂ ಊರ್ವಿ ಮಾನ್ಯ ಶೇ.93.60 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಶಾಲಾ ಸಂಚಾಲಕರಾದ ಎಂ.ಪಿ.ಉಮೇಶ್ ಈ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದು ವಿದ್ಯಾರ್ಥಿಗನ್ನು ಅಭಿನಂದಿಸಿದ್ದಾರೆ.
