ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಮಿನಿ ಬಸ್; 17 ಮಂದಿಗೆ ಗಾಯ..!

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಮಿನಿ ಬಸ್; 17 ಮಂದಿಗೆ ಗಾಯ..!

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ ಒಂದು ಗುಡ್ಡ ಏರಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾದ ಪರಿಣಾಮ 17 ಮಂದಿ ಗಾಯಗೊಂಡ ಘಟನೆ ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ವ್ಯಾಪ್ತಿಯ ಚಿಬಿದ್ರೆಯ ಕಾಪು ಚಡಾವು ಎಂಬಲ್ಲಿ ಭಾನುವಾರ ನಡೆದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಬೆಂಗಳೂರು ಮೂಲದ ವೆಂಕಟಸ್ವಾಮಪ್ಪ (45) ಹಾಗೂ ಇನ್ನುಳಿದ ಗಾಯಳುಗಳನ್ನು ಕೀರ್ತನಾ (15), ತನಿಷ್ಕಾ (7), ಯಶವಂತ (21), ರೂಪಾ(37), ಹಂಸಾ (39), ತನುಶ್ರೀ(21), ವಿಕಾಸ್‌ (13), ಅಖೀಲಾ (23), ರತ್ನಮ್ಮ (47), ಬಾಲಕೃಷ್ಣ (33), ಎಲ್ಲಮ್ಮ (62), ರೂಪಾ (33), ಪ್ರೀತಮ್‌ (11) ಯಲ್ಲಮ್ಮ, ಪಾವನಾ, ಮಂಜುಳಾ, ಬಿಂದುಶ್ರೀ ಮಿಥುನ್‌ ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಚಾರ್ಮಾಡಿ ಘಾಟ್ ಮಾರ್ಗದ ಮೂಲಕ ಮಂಗಳೂರಿಗೆ ಆಗಮಿಸುತ್ತಿದ್ದ ಮಿನಿ ಬಸ್‌ ಅಪಘಾತವಾಗಿದೆ. ಮಿನಿ ಬಸ್ ರಸ್ತೆ ಬಿಟ್ಟು ನದಿ ಬದಿ ಇರುವ ಗುಡ್ಡವನ್ನು ಹತ್ತಿದ್ದು, ಖಾಸಗಿ ವಿದ್ಯುತ್‌ ಲೈನ್‌ ಕಂಬಕ್ಕೆ ಬಡಿದಿದೆ. ಪರಿಣಾಮ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿ ಗಾಯಗೊಂಡಿದ್ದು ,ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೀಗಾಗಿ ಸಂಭವನೀಯ ಭಾರೀ ಅನಾಹುತ ತಪ್ಪಿದಂತಾಗಿದೆ

ರಾಜ್ಯ