
ಉಡುಪಿ ಜೂನ್ 04: ಬಿಜೆಪಿಗೆ ಬಿಸಿ ತುಪ್ಪವಾಗಿದ್ದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಗೆಲುವಿನ ನಗೆ ಬೀರುವ ಮೂಲಕ ಬಿಜೆಪಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದದ ಗೋ ಬ್ಯಾಕ್ ಅಭಿಯಾನದ ಬಳಿಕವೂ ಬಿಜೆಪಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದೆ. ಕಾಂಗ್ರೇಸ್ ನ ಜಯಪ್ರಕಾಶ್ ಹೆಗ್ಡೆ ವಿರುದ್ದ ಒಂದೂವರೆ ಲಕ್ಷ ಮತಗಳ ಅಂತರದಲ್ಲಿ ಗೆಲುವನ್ನು ಕೋಟ ಶ್ರೀನಿವಾಸ ಪೂಜಾರಿ ಸಾಧಿಸಿದ್ದಾರೆ
