
ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್.ಟಿ.ಮೋರ್ಚಾದ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಂ.ಕೆ. ಮೇಲೆ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯರ್ತಡ್ಕದಲ್ಲಿ ಕಾಂಗ್ರೆಸ್ ಮುಖಂಡ ಕಳೆಂಜ ನಿವಾಸಿ ಕುಶಾಲಪ್ಪ ಗೌಡ ಕಜೆ ಎಂಬಾತನು ರಾಜೇಶ್ ಎಂ.ಕೆ. ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಯತ್ನಕ್ಕೆ ಸಂಬಂಧಿಸಿ ಜೂ. 5ರಂದು ಆರೋಪಿ ಕುಶಾಲಪ್ಪ ಗೌಡ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇನ್ನು ಇದೇ ಘಟನೆಗೆ ಸಂಭಂದಿಸಿದಂತೆ. ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಮತ್ತು ಫೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿ ಕಳೆಂಜ ಗ್ರಾಮದ ನಿವಾಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್.ಎಮ್.ಕೆ ವಿರುದ್ಧ ಮಾನಭಂಗ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಫೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
