2019 ರ ಲೋಕಸಭಾ ಚುನಾವಣೆಯಲ್ಲಿ 23 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ ಕೇವಲ 9 ಸ್ಥಾನ ಗೆದ್ದು ಹೀನಾಯ ಪ್ರದರ್ಶನ ನೀಡಿದೆ. ನೈತಿಕ ಹೊಣೆ ಹೊತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾದ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಇತ್ತ ಉದ್ಭವ್ ಠಾಕ್ರೆ ಬಣ ಉತ್ತಮ ಪ್ರದರ್ಶನ ನೀಡಿದ್ದು ಬಿಜೆಪಿ ಗೆ ತಲೆನೋವಾಗಿ ಪರಿಣಮಿಸಿದೆ.


