
ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ನೀಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಪೂರ್ವಾಹ್ನ 11 ಗಂಟೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಹಾಜರಾದರು.
ಕೇಸ್‌ನ ವಿಚಾರಣೆ ಕೈಗತ್ತಿಕೊಂಡ ನ್ಯಾಯಪೀಠ, ರಾಹುಲ್ ಗಾಂಧಿ ಅವರ ಜಾಮೀನು ಅರ್ಜಿ ಪರಿಶೀಲಿಸಿ ಕೂಡಲೆ ಜಾಮೀನು ನೀಡಿದೆ. ಇದಕ್ಕೆ ಡಿ.ಕೆ.ಸುರೇಶ್ ಅವರು ಶ್ಯೂರಿಟಿ ನೀಡಿದ್ದಾರೆ. ಜಾಮೀನು ನೀಡಿದ ಬಳಿಕ ನ್ಯಾಯಪೀಠ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ
