ಕನಕಮಜಲು: ಕೋಡಿ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ.

ಕನಕಮಜಲು: ಕೋಡಿ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕನಕಮಜಲು ಸುಣ್ಣಮಜಲು ತಿರುವಿನಲ್ಲಿ

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿಯಾಗಿ ಸಿಲಿಂಡರ್ ನಿಂದ ಗ್ಯಾಸ್ ಸೋರೆಯಾಗುತ್ತಿದ್ದು, ಹೆದ್ದಾರಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ಜೂ.10ರಂದು ಸಂಜೆ ಸಂಭವಿಸಿದೆ.

ಫೊಟೊ : ಶ್ರವಿಕ್ ಅಡ್ಕ

ಮಡಿಕೇರಿ ಕಡೆಯಿಂದ ಮಂಗಳೂರಿಗೆ ಗ್ಯಾಸ್ ಸಿಲಿಂಡರ್ ಸಾಗಾಟ ಮಾಡುತ್ತಿದ್ದ ಲಾರಿ ಜೋರಾಗಿ ಸುರಿಯುವ ಮಳೆಯ ಮಧ್ಯೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವುದಾಗಿ ತಿಳಿದುಬಂದಿದೆ.ಈ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿರುವುದಾಗಿ ತಿಳಿದುಬಂದಿದೆ. ಇದೀಗ ಸ್ಥಳಕ್ಕೆ ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಕಾರ್ಯಾಚರಣೆಯಲ್ಲಿ ತೊಡಗಿರುವುದಾಗಿ ತಿಳಿದುಬಂದಿದೆ

ರಾಜ್ಯ