ಇತಿಹಾಸದಲ್ಲೇ ಮೊದಲು : ಕೊಲೆ ಪ್ರಕರಣದ ವಿಚಾರಣೆಗೆ ಠಾಣೆ

ಇತಿಹಾಸದಲ್ಲೇ ಮೊದಲು : ಕೊಲೆ ಪ್ರಕರಣದ ವಿಚಾರಣೆಗೆ ಠಾಣೆ

.

ಬೆಂಗಳೂರು : ಇತಿಹಾಸದಲ್ಲಿಯೇ ಮೊದಲ ಬಾರಿಗೆ ಒಂದು ಪೊಲೀಸ್‌ ಠಾಣೆಯನ್ನು ಶಾಮಿಯಾನದಿಂದ ಮುಚ್ಚಿದ ಪ್ರಸಂಗ ನಡೆದಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿರುವ ಇರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಗೆ ಶಾಮಿಯಾನ ಹೊದಿಸುವಂತೆ ಪೊಲೀಸ್‌ ಆಯುಕ್ತ ದಯಾನಂದ್‌ ಸೂಚನೆ ನೀಡಿದ್ದಾರೆ. ಅದರಂತೆ ಠಾಣೆಯ ಸುತ್ತ ಸೈಡ್ ವಾಲ್ ಗಳನ್ನ ಕಟ್ಟಿ, ಆರೋಪಿಗಳು ಕಾಣದಂತೆ ಮಾಡಲಾಗಿದೆ. ಸದ್ಯ ಆಯುಕ್ತರು ಕೂಡ ಪೊಲೀಸ್‌ ಠಾಣೆಯಲ್ಲಿಯೇ ಇದ್ದಾರೆ. ಜೊತೆಗೆ ಠಾಣೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಠಾಣೆ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 13 ರಿಂದ ಜೂನ್ 17 ವರೆಗೆ ಜಾರಿವರೆಗೂ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಠಾಣಾ ಗೇಟ್ ಕ್ಲೋಸ್ ಮಾಡಿ ಠಾಣೆಯ ಬಳಿ ಶಾಮಿಯಾನ ಹಾಕಲಾಗಿದ್ದು, ಸಣ್ಣಪುಟ್ಟ ಕೇಸ್ ಗಳು ಅಂತ ಬರುವವರನ್ನು ಪೊಲೀಸರು ಗೇಟ್ ಬಳಿಯೇ ತಡೆದು ಅಲ್ಲಿಂದ ವಾಪಸ್ ಕಳುಹಿಸುತ್ತಿದ್ದಾರೆ ಎನ್ನಲಾಗಿದೆ.

ರಾಜ್ಯ