ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ.

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ.

ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಏರಿಸಿರುವುದನ್ನು ವಿರೋಧಿಸಿ  ಪ್ರತಿಭಟನಾ ಸಭೆ ನಡೆಯಿತು

ಪ್ರತಿಭಟನೆಯಲ್ಲಿ ಭಾಗವಹಿಸಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ  ರಾಜ್ಯದ  ಸರಕಾರ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ ಮಾಡುವುದರ ಮೂಲಕ ಜನ ಸಾಮಾನ್ಯರ ಮೇಲೆ ಆರ್ಥಿಕ ಸವಾರಿ ಮಾಡುತ್ತಿದೆ.

ಪೆಟ್ರೋಲ್ ಬೆಲೆ , ಡಿಸೆಲ್  ಬೆಲೆ ಅಲ್ಲದೆ  ಎಲ್ಲಾ ಆಹರೋತ್ಪನ್ನಗಳ ಬೆಲೆ ಏರಿಕೆಯಿಂದ ಜನರು ಸಮಸ್ಯೆಯಲ್ಲಿ ಸಿಲುಕಿದ್ದರೂ ರಾಜ್ಯ ಸರಕಾರ ನಿದ್ದೆಗೆ ಜಾರಿದಂತಿದ್ದೆ. ಈಗ ಮಾಡಿರುವ ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯದಿದ್ದರೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಅವರು ಎಚ್ಚರಿಕೆ ನೀಡಿದರು. ಪ್ರತಿಭಟನೆ ಸಭೆಯಲ್ಲಿ ಬಿಜೆಪಿ ಹಲವು ಪ್ರಮುಖರು ಭಾಗವಹಿಸಿ ಸರಕಾರದ ವಿರುದ್ಧ ಹರಿಹಾಯ್ದರು‌

ರಾಜ್ಯ