ಮಂಗಳೂರು: ಪಿಡಬ್ಲ್ಯುಡಿ ಗುತ್ತಿಗೆದಾರರ ಮನೆಗೆ ನುಗ್ಗಿದ ಡಕಾಯಿತಿ ಗ್ಯಾಂಗ್ :ಮನೆಯವರನ್ನು ಕಟ್ಟಿಹಾಕಿ ಬೆದರಿಸಿ ದರೋಡೆ:ಪೋಲಿಸರಿಂದ ಶೋಧ ಕಾರ್ಯ ಶ್ವಾನದಳ ಆಗಮನ:

ಮಂಗಳೂರು: ಪಿಡಬ್ಲ್ಯುಡಿ ಗುತ್ತಿಗೆದಾರರ ಮನೆಗೆ ನುಗ್ಗಿದ ಡಕಾಯಿತಿ ಗ್ಯಾಂಗ್ :ಮನೆಯವರನ್ನು ಕಟ್ಟಿಹಾಕಿ ಬೆದರಿಸಿ ದರೋಡೆ:ಪೋಲಿಸರಿಂದ ಶೋಧ ಕಾರ್ಯ ಶ್ವಾನದಳ ಆಗಮನ:

ಮಂಗಳೂರು: ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ಡಕಾಯಿತಿ ತಂಡವೊಂದು ಮನೆಯವರನ್ನು ಕಟ್ಟಿ ಹಾಕಿ ಚೂರಿ ತೋರಿಸಿ ಹಣ ಒಡವೆಗಳನ್ನು ದರೋಡೆ ನಡೆಸಿರುವ ಘಟನೆ ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಪಿಡಬ್ಲ್ಯುಡಿ ಗುತ್ತಿಗೆದಾರ ಉಳಾಯಿಬೆಟ್ಟುವಿನ ಪದ್ಮನಾಭ ಕೋಟ್ಯಾನ್‌ರವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿದೆ‌. ಮುಖ ಮುಚ್ಚಿಕೊಂಡು ಬಂದ 8-9 ಮಂದಿಯಿದ್ದ ತಂಡವೊಂದು ಶುಕ್ರವಾರ ರಾತ್ರಿ 8ಗಂಟೆ ಸುಮಾರಿಗೆ ಮನೆಗೆ ನುಗ್ಗಿದೆ. ಬಳಿಕ ಬಳಿಕ ಮನೆಯವರನ್ನೆಲ್ಲಾ ಬೆಡ್‌ಶೀಟ್ ನಲ್ಲಿ ಕಟ್ಟಿಹಾಕಿ, ಚೂರಿ ತೋರಿಸಿ ಬೆದರಿಸಿದೆ‌. ಈ ವೇಳೆ ಪದ್ಮನಾಭ ಕೋಟ್ಯಾನ್ ಅವರ ಬಲಗೈಗೆ ಚೂರಿಯಿಂದ ಇರಿಯಲಾಗಿದೆ.

ರಾಜ್ಯ