

ಪೋಕ್ಸೋ ಆರೋಪದಲ್ಲಿ ಸಿಐಡಿ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಬಂಧಿಸದಂತೆ ಹೈಕೋರ್ಟ್ ನಿರ್ದೆಶನ ನೀಡಿರುವ ಬೆನ್ನಲ್ಲೆ. ಮಾಜಿ ಸಿಎಂ ಸದ್ಯಕ್ಕೆ ಬಂಧನ ಭೀತಿಯಿಂದ ನಿರಾಳರಾಗಿದ್ದು ಕರಾವಳಿ ದೇವಸ್ಥಾನಗಳಿಗೆ ಬೇಟಿ ನೀಡಿದ್ದಾರೆ.


:ಮ ಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿದರು.
ಸುಬ್ರಹ್ಮಣ್ಯ ನ ದರ್ಶನ ಪಡೆದ ಬಳಿಕ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ನಾಣ್ಯಗಳ ತುಲಾಭಾರ ಸೇವೆ ನೆರವೇರಿಸಿದರು.
ಈ ವೇಳೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಇತರೆ ಬಿಜೆಪಿ ನಾಯಕರು ಬಿ ಎಸ್ ಯಡಿಯೂರಪ್ಪ ಅವರ ಜೊತೆಗಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೇಟಿ ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ಬಳಿಕ ದೇವಾಲಯದಲ್ಲಿ ಧರ್ಮಾಧಿಕಾರಿಗಳು ಯಡಿಯೂರಪ್ಪನವರನ್ನು ಗೌರವಿಸಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಪಾರ್ಶನಾಥ್, ಧರ್ಮಸ್ಥಳದ ಪಿ.ಎಸ್.ಕೃಷ್ಣ ಸಿಂಗ್ ಜೊತೆಯಲ್ಲಿದ್ದರು.



