ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ:   ಓವರ್‌ ಟೇಕ್‌ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಟೆಂಪೋ ಚಾಲಕ

ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ:   ಓವರ್‌ ಟೇಕ್‌ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಟೆಂಪೋ ಚಾಲಕ

ಮಂಗಳೂರು: ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದಿದೆ. ಇಂದು ಮಧ್ಯಾಹ್ನ ಗೂಡ್ಸ್ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ನ್ನು ಗೂಡ್ಸ್ ಟೆಂಪೋ ಓವರ್ ಟೇಕ್ ಮಾಡುವ ವೇಳೆ ದುರ್ಘಟನೆ ನಡೆದಿದೆ.  ಗೂಡ್ಸ್‌ ಟೆಂಪೋ ಚಾಲಕ ಓವರ್‌ ಟೇಕ್‌ ಮಾಡುವ ಸಂದರ್ಭದಲ್ಲಿ ಎದುರಿನಿಂದ ರಾಜಹಂಸ ಬಸ್ ಬಂದಿದ್ದು ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ಟೆಂಪೋ ರಾಜಹಂಸಕ್ಕೆ ಡಿಕ್ಕಿ ಹೊಡೆದಿದ್ದು ಬಳಿಕ ಹಳ್ಳಕ್ಕೆ ಬಿದ್ದಿದೆ. ಇದೇ ವೇಳೆ ಐರಾವತ ಬಸ್‌ ರಾಜಹಂಸ ಬಸ್ಸಿಗೆ ಮುಖಾಮುಖಿ ಡಿಕ್ಕಿಯಾಗಿದೆ

ರಾಜ್ಯ