
ಕಡಬ: ಇಲ್ಲಿನ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ಕುಮಾರಧಾರ ನದಿಗೆ ಹಾರಿ ಪೊದೆಯಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಆಗ್ನಿ ಶಾಮಕ ದಳ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆಸ್ಪತ್ರೆಗೆ

ದಾಖಲಿಸಿದ ಬಳಿಕ ವ್ಯಕ್ತಿಯ ಪರಿಚಯ ಲಭ್ಯವಾಗಿದೆ.
ಮೂಲತ:ಆಂದ್ರ ಪ್ರದೇಶದ ಮಡಕಸಿರ ನಿವಾಸಿ ರವಿ ಕುಮಾರ್ ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ಬೆಂಗಳೂರು ಮಾರ್ತಹಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಈತ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದು ಅದರಲ್ಲಿ ನಷ್ಟ ಉಂಟಾದ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ, ಸುಮಾರು ಎರಡುಲಕ್ಷದಷ್ಟು ಸಾಲ ಮಾಡಿದ್ದು ನೊಂದು ಕೈ ಕೊಯ್ದುಕೊಂಡು ಬಳಿಕ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನೀಸಿದ್ದಾನೆ ಎಂದು ಪೊಲೀಸರ ವಿಚಾರಣೆ ವೇಳೆ ಆತ ತಿಳಿಸಿದ್ದಾನೆ.
ಈತ ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಮುಗಿಸಿ ಕಡಬ-ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿಗೆ ಬಂದಿದ್ದ, ಸೋಮವಾರ ಮುಂಜಾನೆ 5 ರ ಸುಮಾರಿಗೆ ಬ್ಯಾಗನ್ನು ಬಸ್ ನಿಲ್ದಾಣದಲ್ಲೇ ಇರಿಸಿ ತನ್ನ ಕೈಯನ್ನು ಕುಯ್ದುಕೊಂಡು ನದಿಗೆ ಹಾರಿದ್ದಾನೆ.
ತುಂಬಿ ಹರಿಯುತ್ತಿದ್ದ ಕುಮಾರಧಾರ ನದಿಗೆ ಹಾರಿದ ಬಳಿಕ ಆತನಿಗೆ ಜೀವ ಭಯ ಉಂಟಾಗಿ, ಪೊದೆಯೊಂದು ಸಿಕ್ಕಿದ ಕಾರಣ ಅದನ್ನು ಹಿಡಿದು ಬಳಿಕ ರಕ್ಷಣೆಗಾಗಿ ಕೂಗಿಕೊಂಡಿದ್ದ, ಹೀಗಾಗಿ ಸ್ಥಳೀಯರು ಇಲಾಖೆಗೆ ಮಾಹಿತಿ ರವಾನಿಸಿದ್ದರು. ಕೂಡಲೇ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ , ಪೊಲೀಸರು,ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರ್ಯಾಚರಣೆ ಮಾಡಿದ್ದಾರೆ.
ಮೊಬೈಲ್ ಪೋನ್ ತುಂಬಿ ಹರಿಯುವ ನದಿಯಲ್ಲಿ ನಾಪತ್ತೆಯಾಗಿದ್ದು.ಈತನ ಪ್ಯಾಂಟ್ ಕಿಸೆಯಲ್ಲಿ ಹತ್ತು ಸಾವಿರ ರೂ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೈಗೆ ಗಂಭೀರ ಸ್ವರೂಪದ ಗಾಯವಾದ ಕಾರಣ ಕಡಬ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
