
ಕೆರೆಗೆ ಕಾಲು ಜಾರಿ ಬಿದ್ದು ವಯೋವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ಜು.15ರಂದು ಬೆಳಿಗ್ಗೆ ಸಂಭವಿಸಿದೆ.

ಸೋಣಂಗೇರಿ ದಿ. ಮಂಜಪ್ಪ ಶೆಟ್ಟಿ ಅವರ ಧರ್ಮಪತ್ನಿ ಮಾನಕ್ಕರವರ ಶವ ಅವರು ಬೆಳಿಗ್ಗೆ ತಮ್ಮ ತೋಟದಲ್ಲಿ ಕೆರೆಗೆ ಬಿದ್ದಸ್ಥಿತಿಯಲ್ಲಿ ಪತ್ತೆಯಾಗಿದ್ದು , ಅವರಿಗೆ 82 ವರ್ಷ ವಯಸ್ಸಾಗಿತ್ತು.ಮೃತರು ಇಬ್ಬರು ಪುತ್ರಿಯರಾದ ಜಯಶ್ರೀ, ಮಂಜುಳ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.
